ಹೆಣ್ಮಕ್ಕಳ ಶಿಕ್ಷಣಕ್ಕೆ ಅಡ್ಡಿ, ಕೋರ್ಟ್ ತೀರ್ಪಿನ ದುರ್ಬಳಕೆ ವಿರುದ್ಧ ಪ್ರತಿಭಟನೆ:ಯಶಸ್ವಿಗೊಳಿಸಲು ಎಸ್ಸೆಸ್ಸೆಫ್ ಕ್ಯಾಂಪಸ್ ಮಂಗಳೂರು ಡಿವಿಷನ್ ಕರೆ
.
ಮಂಗಳೂರು :ಹಿಜಾಬ್ ಸಂಬಂಧಿತ ಪ್ರಕರಣದಲ್ಲಿ ರಾಜ್ಯ ಹೈಕೋರ್ಟ್ ನ ಮಧ್ಯಂತರ ಆದೇಶವನ್ನು ದುರುಪಯೋಗ ಪಡಿಸುವ ಮೂಲಕ ಹೆಣ್ಮಕ್ಕಳ ಶಿಕ್ಷಣಕ್ಕೆ ಅಡ್ಡಿ ಪಡಿಸುವ ಪ್ರಸಂಗಗಳ ವಿರುದ್ಧ ಎಸ್ಸೆಸ್ಸೆಫ್ ದ.ಕ ಜಿಲ್ಲಾ ವೆಸ್ಟ್ & ಈಸ್ಟ್ ಸಮಿತಿ ಫೆಬ್ರುವರಿ 23 ರಂದು ಮಂಗಳೂರಿನ ಕ್ಲಾಕ್ ಟವರ್ ಬಳಿ ಹಮ್ಮಿಕೊಂಡ ಪ್ರತಿಭಟನೆಯಲ್ಲಿ ಡಿವಿಷನ್ ವ್ಯಾಪ್ತಿಯ ಕ್ಯಾಂಪಸ್ ವಿದ್ಯಾರ್ಥಿಗಳು, ನಾಯಕರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಯಶಸ್ವಿಗೊಳಿಸಬೇಕೆಂದು
ಎಸ್ಸೆಸ್ಸೆಫ್ ಮಂಗಳೂರು ಡಿವಿಷನ್ ಕ್ಯಾಂಪಸ್ ಕಾರ್ಯದರ್ಶಿ ಅಕೀಲ್ ಹಸನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Comments
Post a Comment